ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm