ಬ್ರೇಕಿಂಗ್ ನ್ಯೂಸ್
01-08-23 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಪ್ರೋಟೋಕಾಲ್ ಪ್ರಕಾರ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕದ ಕಾರಣಕ್ಕೆ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ, ಇರುವೈಲು ಗ್ರಾಮ ಪಂಚಾಯತ್ ಪಿಡಿಓ ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣ ಅಧಿಕಾರಿಯನ್ನು ಅಮಾನತು ಮಾಡಿರುವ ಕ್ರಮವನ್ನು ಆಕ್ಷೇಪಿಸಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನ್ಯಾಯ ಕೇಳಿದ ಪ್ರಸಂಗ ನಡೆದಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಉಮಾನಾಥ ಕೋಟ್ಯಾನ್, ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತದ ಪ್ರೋಟೋಕಾಲ್ ಪ್ರಕಾರವೇ ಮುದ್ರಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರ ಹೆಸರನ್ನೂ ಹಾಕಲಾಗಿತ್ತು. ಆದರೆ, ಎರಡು ದಿನ ಇರುವಾಗ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ ಇಬ್ಬರು ಅಧಿಕಾರಿಗಳನ್ನು ಜಿಪಂ ಸಿಇಓ, ವಿನಾಕಾರಣ ಸಸ್ಪೆಂಡ್ ಮಾಡಿದ್ದಾರೆ ಎಂದರು. ಇದಕ್ಕೆ ಆಕ್ಷೇಪಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ಗಮನಕ್ಕೆ ವಿಷಯದ ವಿವರಣೆ ನೀಡಿದರು.
ಆದರೆ, ಈ ಬಗ್ಗೆ ಇತರೇ ಬಿಜೆಪಿ ಶಾಸಕರು ಆಕ್ಷೇಪ ಸೂಚಿಸಿದ್ದಲ್ಲದೆ, ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು. ಯಾಕಾಗಿ ಇಬ್ಬರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ವಿವರಣೆ ಕೊಡಬೇಕು ಎಂದು ಉಮಾನಾಥ ಕೋಟ್ಯಾನ್ ಕೇಳಿಕೊಂಡರು. ಮುಖ್ಯಮಂತ್ರಿ ಜಿಲ್ಲಾಧಿಕಾರಿಯನ್ನು ಪ್ರಶ್ನೆ ಮಾಡಿದ್ದು, ಪ್ರೋಟೋಕಾಲ್ ಮೀರದಂತೆ ಸೂಚನೆ ನೀಡಿದರು. ಪ್ರೋಟೋಕಾಲ್ ತಪ್ಪು ಮಾಡಿದ್ದರೆ, ಜಿಲ್ಲಾಧಿಕಾರಿಯನ್ನು ಸಸ್ಪೆಂಡ್ ಮಾಡಿ. ಅವರು ಹೇಳಿದ ರೀತಿಯಲ್ಲೇ ಆಮಂತ್ರಣ ಪತ್ರಿಕೆ ಮಾಡಲಾಗಿತ್ತು ಎಂದು ಹೇಳಿ ಪತ್ರಿಕೆಯನ್ನು ಮುಖ್ಯಮಂತ್ರಿಯ ಕೈಗಿತ್ತರು ಉಮಾನಾಥ ಕೋಟ್ಯಾನ್.
ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕಿಲ್ಲ ಎಂದು ಅಧಿಕಾರಿಗಳನ್ನು ಅಮಾನತು ಮಾಡಬೇಕಿತ್ತೇ.. ರಾಜ್ಯದಲ್ಲಿ 5950 ಗ್ರಾಮ ಪಂಚಾಯತ್ ಗಳಿವೆ. ಎಲ್ಲದಕ್ಕೂ ಸಚಿವರಿಗೆ ಬರುವುದಕ್ಕೆ ಆಗುತ್ತಾ.. ಹಾಗಂತ, ಸಸ್ಪೆಂಡ್ ಮಾಡುವುದಾ.. ಈ ಬಗ್ಗೆ ನಾವು ಶಾಸಕರು ಫೋನ್ ಮಾಡಿ ಕೇಳಿದರೂ, ಜಿಲ್ಲಾಧಿಕಾರಿ, ಸಿಇಓ ಕ್ಯಾರ್ ಮಾಡಿಲ್ಲ. ಕನಿಷ್ಠ ಗೌರವ ಕೊಟ್ಟಿಲ್ಲ ಎಂದು ದೂರಿದರು ಕೋಟ್ಯಾನ್. ಯಾವುದೇ ಪಕ್ಷದ ಶಾಸಕರು ಆದರೂ ಅಧಿಕಾರಿಗಳು ಗೌರವ ಕೊಡಬೇಕು. ಅವರು ಜನರಿಂದ ಆಯ್ಕೆಯಾಗಿ ಬಂದವರು. ಅವರಿಗೆ ಗೌರವ ಕೊಡಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.
ಜುಲೈ 31ರಂದು ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕರ ಸೂಚನೆಯಂತೆ ರದ್ದುಪಡಿಸಲಾಗಿತ್ತು. ಸಚಿವ ಪ್ರಿಯಾಂಕ ಖರ್ಗೆ ಸೂಚನೆ ಪ್ರಕಾರ, ಕಾರ್ಯಕ್ರಮ ರದ್ದು ಮತ್ತು ಇಬ್ಬರು ಅಧಿಕಾರಿಗಳ ಅಮಾನತು ಆಗಿತ್ತು ಎಂದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದರು.
Moodbidri Mla Umanth Kotian slams Congress leaders before CM for suspending PDO and EO for missing Priyank Kharge name in invitation.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm