ಬ್ರೇಕಿಂಗ್ ನ್ಯೂಸ್
03-08-23 09:06 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 3: ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು, ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಉಡುಪಿ ವಿಡಿಯೋ ಘಟನೆ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ಹಿಂದೆ ರಾಕ್ಷಸಿಯರು ಬಂದಿದ್ದರು. ಈಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡಲಿದ್ದೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು.


ಸೌಟು, ಪೊರಕೆ ಹಿಡಿಯುವ ತಾಯಂದಿರ ಕೈಗಳು ಶಸ್ತ್ರ ಹಿಡಿಯಬೇಕು. ಅನ್ಯಾಯಕ್ಕೆದುರಾಗಿ ತಲವಾರು ಹಿಡಿಯಬೇಕು. ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ.
ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್ ಮಾಡಿದ್ದಾರೆ. ನೇತ್ರ ಕಾಲೇಜಿನ ಡಾ.ಅಬ್ದುಲ್ ಖಾದರ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಐದು ಬಾರಿ ನೋಟ್ಸ್ ಬರೆಯುವ ಶಿಕ್ಷೆ ನೀಡಿದ್ದಾರೆ. ಈ ಶಿಕ್ಷೆಯನ್ನು ಬ್ಯೂಟಿಫುಲ್ ಶಿಕ್ಷೆ ಅಂತಾ ಖಾದರ್ ಹೇಳಿದ್ದಾನೆ. ಅಬ್ದುಲ್ ಖಾದರನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು. ಖಾದರ್ ಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬ್ಯೂಟಿಫುಲ್ ಶಿಕ್ಷೆ ನೀಡೋಕೆ ನಮಗೂ ಗೊತ್ತಿದೆ. ನಮ್ಮ ಕಾರ್ಯಕರ್ತರೂ ನಿನಗೆ ಬ್ಯೂಟಿ ಫುಲ್ ಶಿಕ್ಷೆ ನೀಡುತ್ತಾರೆ.

ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ವಿಡಿಯೋ ತೆಗೆದು ಬ್ಲಾಕ್ಮೇಲ್ ಮಾಡುವ ತಂತ್ರ ಹಾಗೇ ನಡೆಯುವಂಥದ್ದಲ್ಲ. ಮಕ್ಕಳಿರುವಾಗಲೇ ಮದ್ರಸಾದಲ್ಲಿ ಈ ರೀತಿಯ ಶಿಕ್ಷಣ ನೀಡುತ್ತಿರುವ ಬಗ್ಗೆ ಅನುಮಾನ ಇದೆ. ರಾಜ್ಯ ಸರ್ಕಾರ ಕೂಡಲೇ ಮದ್ರಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಉಡುಪಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು. ಇದರ ಹಿಂದೆ ಭಯೋತ್ಪಾದಕ ಕೃತ್ಯದ ಹುನ್ನಾರ ಇದೆಯೇ ಎಂಬುದನ್ನು ಪತ್ತೆ ಮಾಡಬೇಕು ಎಂದು ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Sharan Pumpwell well tells people to hold sword instead of broom to fight in justice, Sparks controversy in Udupi.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm