ಉಡುಪಿ ವಿಡಿಯೋ ಪ್ರಕರಣ ; ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಸಂತ್ರಸ್ತ ವಿದ್ಯಾರ್ಥಿನಿ 

04-08-23 11:39 am       Udupi Correspondent   ಕರಾವಳಿ

ಪ್ಯಾರಾ ಮೆಡಿಕಲ್‌ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. 

ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್‌ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. 

ಜುಲೈ 18ರಂದು ಕಾಲೇಜಿನಲ್ಲಿ ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು ಮೊಬೈಲ್‌ನಿಂದ ಡಿಲೀಟ್ ಆಗಿದೆ ಎನ್ನಲಾದ ವಿಡಿಯೊವನ್ನು ಮರು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಮತ್ತೊಂದು ವಿಡಿಯೋ ಲಭ್ಯವಾಗಿದೆ ಎಂಬ ಮಾಹಿತಿ ಶರಣ್ ಪಂಪ್‌ವೆಲ್ ಅವರಿಗೆ ಎಲ್ಲಿಂದ ಲಭ್ಯವಾಗಿದೆ, ಯಾರು ಮಾಹಿತಿ ಕೊಟ್ಟಿದ್ದಾರೆ ಗೊತ್ತಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟ ಯಾವುದೇ ವಿಡಿಯೋ ಲಭ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚಿಂದ್ರ ಸ್ಪಷ್ಟನೆ ನೀಡಿದ್ದಾರೆ.

The victim of the para-medical college video case appeared before the district court on Thursday and gave her statement.