ಬ್ರೇಕಿಂಗ್ ನ್ಯೂಸ್
07-08-23 12:03 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 8: ಸೌಜನ್ಯಾ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಸಾಯಿಸ್ತಾರೆ! ಆದರೆ ಆ ರಹಸ್ಯವನ್ನು ನಾನು ಸಾಯೋದಕ್ಕು ಮೊದಲು ಹೇಳದೇ ಬಿಡೋದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ ಸೌಜನ್ಯಾ ಪ್ರಕರಣದಲ್ಲಿ ಸಿಬಿಐ ತನಿಖೆಯ ದಾರಿ ತಪ್ಪಿಸಿದ್ದು ಯಾರೆಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಸೌಜನ್ಯಾ ಪ್ರಕರಣವನ್ನ ಉದ್ದೇಶಪೂರ್ವಕ ದಾರಿ ತಪ್ಪಿಸಲಾಗಿದೆ. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ ನನ್ನನ್ನು ಕರೆದು, ಇದನ್ನ ಪ್ರಸ್ತಾಪ ಮಾಡಬೇಡ, ಪ್ರಕರಣ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೆ ವಿಧಾನಸಭೆ ಕೊಠಡಿಯಲ್ಲಿ ನಾನು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಸೌಜನ್ಯಾ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯಾ ಪ್ರಕರಣವನ್ನ ಸಿಬಿಐಗೆ ವಹಿಸ್ತೇನೆ ಎಂದಿದ್ದರು.
ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ಭಾವನೆ, ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆ ಅರ್ಧದಲ್ಲಿರುವಾಗಲೇ ಇದರಲ್ಲಿ ಮೋಸ ಆಗಿದೆ ಎನ್ನೋದು ತಿಳಿದುಬಂತು. ಏನು ಮೊಸ, ಯಾರು ಕಾರಣ ಅಂತ ಅದನ್ನ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ಈ ವಿಚಾರ ಹೇಳಿಯೇ ಸಿದ್ಧ. ಸೌಜನ್ಯಾ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು? ಅನ್ಯಾಯ, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಅದಕ್ಕೂ ಮೊದಲು ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಸಾಯಿಸಲು ಅಷ್ಟು ಸುಲಭ ಇಲ್ಲ. ನಾನೂ ದೈವ ಭಕ್ತ. ಆದರೆ ನಾನು ಸಾಯೋದ್ರೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ.
ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇಂಥವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿ ಹಾಕಿದವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಶಾಸ್ತಿ ಅನುಭವಿಸಲೇ ಬೇಕು.
ಸೌಜನ್ಯ ಕುಟುಂಬಸ್ಥರನ್ನ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಅವರಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದು ಸೌಜನ್ಯಾ ಪ್ರಕರಣ ನಡೆದ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾಗಿದ್ದ ವಸಂತ ಬಂಗೇರ ಹೇಳಿಕೆ ನೀಡಿದ್ದಾರೆ.
ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಹೆಚ್ಚುತ್ತಿರುವ ಒತ್ತಡ, ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಶಾಸಕರು ಈ ರೀತಿ ಹೇಳಿಕೆ ನೀಡಿರುವುದು ಕರಾವಳಿ ಭಾಗದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ.
Soujanya rape case, former MLA Vasant bangera marks controversy says I know who killed Soujanya. I know who changed the mind of CBI, in case I leak the secrets they will kill me he added.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm