ಬ್ರೇಕಿಂಗ್ ನ್ಯೂಸ್
08-08-23 10:02 pm Mangalore Correspondent ಕರಾವಳಿ
ಮಂಗಳೂರು, ಆ.8: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವ ವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕರ್ನಾಟಕ ಕಡಲ ತೀರದ ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ರಿಸರ್ಚ್ ಗುಂಪಿನ ಪ್ರಮುಖರಾದ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋಮೀಟರ್ ಉದ್ದಕ್ಕೆ ರಾಜ್ಯದ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ಆತಂಕ ವ್ಯಕ್ತಪಡಿಸಿದರು.
ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.
ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.
ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊತ್ತ 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.
Forest and Environment Minister Eshwar B. Khandre has directed officials to prepare a detailed project report for preventing plastic waste from entering the sea in Karnataka’s coastline through the implementation of the World Bank proposed K-Shore project.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm