ಬ್ರೇಕಿಂಗ್ ನ್ಯೂಸ್
09-08-23 10:46 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಟಿಪ್ಪರ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ರಾಮಣ್ಣ ಅವರ ಜೊತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಎಂಬವರು ಸಂಚರಿಸುತ್ತಿದ್ದು, ಉಳಿದ ಐವರ ಪೈಕಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಬಳಿ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ, ಕಾರು ರಸ್ತೆಯಿಂದ ಹೊರಗೆ ಇಳಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂಭಾಗದಿಂದ ಬರುತ್ತಿದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆಗೆ ಬೆಳುವಾಯಿ ವಾಪಸ್ಸಾಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
Mangalore kinnigoli accident between car and truck one dead on spot. The diseased has been identified as Ramanna.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm