ಬ್ರೇಕಿಂಗ್ ನ್ಯೂಸ್
10-08-23 03:17 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.
ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.
ಇನ್ನು ಕಾಲೇಜಿಗೆ ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಡಿವೈಎಸ್‌ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Udupi toilet video case, CID ADGP Manish says we are waiting for FSL Report from the team.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm