ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm