ಬ್ರೇಕಿಂಗ್ ನ್ಯೂಸ್
10-08-23 10:21 pm Mangalore Correspondent ಕರಾವಳಿ
ಉಡುಪಿ, ಆಗಸ್ಟ್ 10: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಜೊತೆಗೆ ಮಹಿಳೆಯೊಬ್ಬರ ಜೊತೆಗೆ ಸಂಬಂಧ ಇದೆಯೆಂದು ವದಂತಿ ಹಬ್ಬಿತ್ತು. ಅಲ್ಲದೆ, ಆರೋಪಿತ ಮಹಿಳೆಯ ಫೋಟೋವನ್ನು ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು. ಗಂಡನೇ ತನ್ನ ಪತ್ನಿ ಜೊತೆಗೆ ಸಂಸದರು ಸಂಬಂಧ ಇಟ್ಟುಕೊಂಡಿದ್ದಾರೆಂದು ಹೇಳಿಕೆ ನೀಡಿದ್ದರಿಂದ ಸುದ್ದಿಗೆ ರೆಕ್ಕೆ ಪುಕ್ಕ ಬಂದಿತ್ತು. ಘಟನೆ ಬಗ್ಗೆ ಸಂತ್ರಸ್ತ ಮಹಿಳೆ ತನ್ನ ವಿರುದ್ಧ ಕೆಲವರು ಸೇರಿ ತೇಜೋವಧೆ ಮಾಡಿದ್ದಾರೆಂದು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಮಂಗಳೂರಿನ ವಕೀಲ ರಾಘವೇಂದ್ರ ರಾವ್ ಮತ್ತು ಸತೀಶ್ ಶೆಟ್ಟಿ ಎಂಬವರು ಆರೋಪಿಗಳಾಗಿದ್ದರು. ಇದೀಗ ತಮ್ಮ ಮೇಲಿನ ಪ್ರಕರಣ ರದ್ದು ಪಡಿಸಬೇಕೆಂದು ರಾಘವೇಂದ್ರ ರಾವ್, ಉಡುಪಿ ಜಿಲ್ಲಾ ಸೆಷನ್ಸ್ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಸಕಾರಣ ಇಲ್ಲದಿದ್ದರೂ ದುರುದ್ದೇಶದಿಂದ ಚಾರ್ಜ್ ಶೀಟ್ ಹಾಕಲಾಗಿದೆ. ವಾಟ್ಸಪ್ ಮೆಸೇಜ್ ಆಧಾರದಲ್ಲಿ ತನ್ನ ಮೇಲೆ ಆರೋಪ ಹೊರಿಸಿದ್ದು ಸರಿಯಲ್ಲ ಇತ್ಯಾದಿ ಕಾರಣಗಳನ್ನು ಮುಂದಿಟ್ಟು ತನ್ನ ವಿರುದ್ಧದ ಕೇಸು ವಜಾಗೊಳಿಸುವಂತೆ ರಾಘವೇಂದ್ರ ರಾವ್ ಅರ್ಜಿ ಹಾಕಿದ್ದರು.
ಆದರೆ ನೀಡಿರುವ ಕಾರಣಗಳನ್ನು ಮುಂದಿಟ್ಟು ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅಲ್ಲದೆ, ಕೆಳಗಿನ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶಾಂತವೀರ ಶಿವಪ್ಪ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಮಾನಹಾನಿ ಸೇರಿದಂತೆ ಐಟಿ ಆಕ್ಟ್ ನಡಿ ಕೇಸು ದಾಖಲಾಗಿತ್ತು.
Nalin Kateel affair news, Mangalore Senior lawyer Raghavendra Rao application to cancel case rejected by Udupi court. Advocate Raghavendra Rao had made false propaganda of Nalin Kateel having affair with some other married women, after which the women filed a case in 2014.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm