ಬ್ರೇಕಿಂಗ್ ನ್ಯೂಸ್
11-08-23 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿಗೆ ಕಾರಣವಾಗಿತ್ತು. ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆಸಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವಂತಾಗಿತ್ತು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ ಗಳಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಹಾಗೂ ಬಿಜೆಪಿ ಬೆಂಬಲಿತ 11 ಸದಸ್ಯರು ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದಾಗಿ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರ ಪಟ್ಟ ಒಲಿದು ಬಂದಿತ್ತು. ಈ ಬಾರಿ ಅಧ್ಯಕ್ಷ ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದ ಕಾರಣ ಸದಸ್ಯತ್ವ ರದ್ದುಗೊಂಡಿರುವುದು ಜಟಾಪಟಿಗೆ ಕಾರಣ.




ಕೋರ್ಟ್ ತೀರ್ಪಿನ ಪ್ರಕಾರ ಆ ಮಹಿಳೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ನಾಯಕರು ವಾದಿಸಿದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೆಸ್ ಕಾರ್ಯಕರ್ತರ ವಾದವಾಗಿತ್ತು. ಇದರಿಂದ ಚುನಾವಣೆ ನಡೆಸಲಾಗದೆ ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಜಮಾಯಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.




ಮಧ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರನ್ನು ಹೊರಗಿಟ್ಟು, ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಬಿಜೆಪಿ ಬೆಂಬಲಿತ ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಇವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು ಕಾಂಗ್ರೆಸ್ ಬೆಂಬಲಿತರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಮಧ್ಯಾಹ್ನದಿಂದಲೇ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಿಥುನ್ ರೈ ಸ್ಥಳದಲ್ಲಿ ಇದ್ದುದರಿಂದ ಎರಡೂ ಕಡೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದು ಜನರನ್ನು ಚದುರಿಸಿದ್ದಾರೆ.
Fight between Congress and BJP near Haleyangadi panchyath over election's in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm