ಬ್ರೇಕಿಂಗ್ ನ್ಯೂಸ್
12-08-23 07:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಟೀಕಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Mangalore DYFI salms at MESCOM for regular power cuts in the city after Gruha Jyothi being introduced in state.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm