ಬ್ರೇಕಿಂಗ್ ನ್ಯೂಸ್
18-08-23 09:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 18: ತುರ್ತು ಸ್ಥಿತಿಯಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕರೆತರುತ್ತಿದ್ದ ಆ್ಯಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಪಲ್ಟಿಯಾದ ರಭಸಕ್ಕೆ ತಲೆಗೆ ತೀವ್ರ ಗಾಯಗೊಂಡ ಆಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಖಾಸಗಿ ಆಂಬುಲೆನ್ಸ್ ಚಾಲಕ, ಗುರುವಾಯನಕೆರೆ ನಿವಾಸಿ ಶಬೀರ್ (32) ಮೃತರು. ಇವರು ತುರ್ತು ಚಿಕಿತ್ಸೆಯ ಕಾರಣಕ್ಕೆ ರೋಗಿಯೊಬ್ಬರನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಅತಿ ವೇಗದಿಂದಾಗಿ ಆಂಬುಲೆನ್ಸ್ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿಯಾಗಿದ್ದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಚಾಲಕ ಶಬೀರ್ ತಲೆಗೆ ಗಂಭೀರ ಗಾಯಗೊಂಡಿದ್ದ.
ಕೂಡಲೇ ಅವರನ್ನು ಹಾಗೂ ವಾಹನದಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಗಂಡಸನ್ನು ಬೇರೆ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಶಬೀರ್ ತಲೆಗೆ ತೀವ್ರ ಗಾಯಗೊಂಡು ರಕ್ತಸ್ರಾವದಿಂದಾಗಿ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೆ ಹೆಚ್ಚೇನು ಗಾಯವಾಗದೆ ಅಪಾಯದಿಂದ ಪಾರಾಗಿದ್ದಾರೆ.
Mangalore Ambulance driver dies on spot after ambulance topples at Bantwal with patient. The deceased has been identified as Shabir.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm