ಬ್ರೇಕಿಂಗ್ ನ್ಯೂಸ್
22-08-23 02:00 pm Mangalore Correspondent ಕರಾವಳಿ
Photo credits : Dominic Saldanha, Headline Karnataka
ಮಂಗಳೂರು, ಆಗಸ್ಟ್ 22: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.
ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ
ಅತಿವೇಗ, ನಿರ್ಲಕ್ಷ್ಯದ ಚಾಲನೆ ಪ್ರಕರಣದಲ್ಲಿ 71 ಪ್ರಕರಣಗಳು ದಾಖಲಾದರೆ, ಮದ್ಯಸೇವಿಸಿ ಚಾಲನೆ 20 ಪ್ರಕರಣ, ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ 42 ಪ್ರಕರಣ, ಚಾಲನೆ ವೇಳೆ ಮೊಬೈಲ್ ಬಳಕೆ 4 ಪ್ರಕರಣ, ಸಿಗ್ನಲ್ ಜಂಪಿಂಗ್ ಪ್ರಕರಣ 10 ಪ್ರಕರಣ, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣ 7 ಪ್ರಕರಣ, ಹೆಲ್ಮೆಟ್ ಹಾಕದೆ ವಾಹನ ಚಾಲನೆ 128 ಪ್ರಕರಣ, ಸೀಟ್ ಬೆಲ್ಟ್ ಹಾಕದೆ ಚಾಲನೆಯ 16 ಪ್ರಕರಣಗಳು ದಾಖಲಾಗಿವೆ. ಒಟ್ಟು 298 ಪ್ರಕರಣ. ಈ ಪ್ರಕರಣಗಳಲ್ಲಿ ಡಿಎಲ್ ರದ್ದಿಗೆ ಶಿಫಾರಸು ಮಾಡಲಾಗಿದೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ಮೂಲಕ ನಿಷೇಧಿತ ಸ್ಥಳದಲ್ಲಿ ಪಾರ್ಕಿಂಗ್ 593, ಕರ್ಕಶ ಹಾರ್ನ್ 106, ಟಿಂಟ್ ಗ್ಲಾಸ್ 70, ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬಾಡಿಗೆ ಹೋಗದಿರುವ ಪ್ರಕರಣ 13, ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರದ 28 ಪ್ರಕರಣಗಳು ದಾಖಲಾಗಿವೆ.
298 people booked for violation of traffic rules in Mangalore in the last 15 days, DL Cancellation requested by Commissioner Kuldeep.
23-05-25 11:54 am
HK News Desk
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm