ಬ್ರೇಕಿಂಗ್ ನ್ಯೂಸ್
24-08-23 11:01 pm Mangalore Correspondent ಕರಾವಳಿ
ಬಂಟ್ವಾಳ, ಆಫಗಸ್ಟ್ 24: ಮೊನ್ನೆಯಷ್ಟೇ ಸಂಸದ ನಳಿನ್ ಕುಮಾರ್ ಕಲ್ಲಡ್ಕದಲ್ಲಿ ಗಬ್ಬೆದ್ದು ಹೋದ ರಸ್ತೆಯನ್ನು ಸರಿಪಡಿಸುವಂತೆ ಗುತ್ತಿಗೆದಾರ ಕಂಪನಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಆದರೆ ಅಧಿಕಾರಿಗಳು ಸಂಸದರ ಮಾತಿಗೆ ಕ್ಯಾರೇ ಎಂದಿಲ್ಲ. ಇದರಿಂದ ರೊಚ್ಚಿಗೆದ್ದ ಕಲ್ಲಡ್ಕ ಪೇಟೆಯ ವ್ಯಾಪಾರಸ್ಥರು ಮತ್ತು ಸಾರ್ವಜನಿಕರೇ ಸೇರಿ ಗುತ್ತಿಗೆ ಕಂಪನಿಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿರುವುದರಿಂದ ರೋಸಿ ಹೋದ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು, ಪ್ರತಿಭಟನಾಕಾರರ ಜೊತೆಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ನಿಲ್ಲಿಸಲಾಗಿದೆ.


ಇದೇ ವೇಳೆ ಪ್ರತಿಭಟನಾಕಾರರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲಡ್ಕದಲ್ಲಿ ರಸ್ತೆಯೇ ಛಿದ್ರಗೊಂಡಿದೆ. ಹೊಂಡ, ಗುಂಡಿಗಳನ್ನು ಮುಚ್ಚಿ, ರಸ್ತೆಯನ್ನು ತಾತ್ಕಾಲಿಕ ಸಂಚಾರಕ್ಕೆ ಸರಿಪಡಿಸುವ ಕೆಲಸ ಆಗಬೇಕು. ಧೂಳಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಡ್ರೈನೇಜ್ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಂದಿನ ಬುಧವಾರದೊಳಗೆ ರಸ್ತೆ ಕಾಮಗಾರಿ ಆರಂಭಗೊಳ್ಳದೇ ಇದ್ದರೆ, ಕಲ್ಲಡ್ಕ ಪೇಟೆ ಬಂದ್ ಮಾಡಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಸಂಸದರ ಮಾತಿಗೆ ಕ್ಯಾರೆನ್ನದ ಗುತ್ತಿಗೆ ಕಂಪನಿ ಅಧಿಕಾರಿಗಳು
ಸಂಸದ ನಳಿನ್ ಕುಮಾರ್ ಮೊನ್ನೆ ಆಗಸ್ಟ್ 16ರಂದು ಬಂಟ್ವಾಳಕ್ಕೆ ಬಂದಿದ್ದಾಗ ಕಲ್ಲಡ್ಕದ ವರ್ತಕರು ಮತ್ತು ಸಾರ್ವಜನಿಕರು ಭೇಟಿ ಮಾಡಿ, ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿಯಿಂದ ಆಗಿರುವ ತೊಂದರೆ ಬಗ್ಗೆ ಗಮನ ಸೆಳೆದಿದ್ದರು. ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ರಸ್ತೆ ಹದಗೆಟ್ಟಿದ್ದು ಹಾಗೂ ಧೂಳಿನಿಂದ ಜನರು ತೀವ್ರ ಸಮಸ್ಯೆಗೆ ಒಳಗಾಗಿದ್ದನ್ನು ವರ್ತಕರು ತಿಳಿಸಿದ್ದರು. ಪ್ರತಿಕ್ರಿಯಿಸಿದ್ದ ಸಂಸದ ನಳಿನ್, ಮಳೆ ಕಡಿಮೆಯಾದ ಕೂಡಲೇ ಡಾಂಬರು ಹಾಕಿಸುತ್ತೇನೆ. ಧೂಳಿನ ಸಮಸ್ಯೆಗೆ ತಕ್ಷಣವೇ ಕಲ್ಲಡ್ಕದಲ್ಲಿ ಪ್ರತಿನಿತ್ಯ ನೀರು ಸಿಂಪಡಿಸಬೇಕೆಂದು ಸೂಚನೆ ನೀಡಿದ್ದರು. ಆದರೆ ಸಂಸದರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮಸ್ಯೆ ಬಗ್ಗೆ ಸ್ಪಂದನೆಯನ್ನೇ ಮಾಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ವರ್ತಕರು ಮತ್ತು ಸಾರ್ವಜನಿಕರು ಗುರುವಾರ ಗುತ್ತಿಗೆ ಕಂಪನಿಯ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.
Mangalore Kalladka nasty highway raods filled with dust, sudden protest held.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm