ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm