ಬ್ರೇಕಿಂಗ್ ನ್ಯೂಸ್
29-08-23 07:32 pm Mangalore Correspondent ಕರಾವಳಿ
ಉಳ್ಳಾಲ, ಆ.29: ಸರಕಾರಿ ಜಾಗದ ಬೆಲೆಬಾಳುವ ಮರಗಳನ್ನು ಮಾರಿದ ಆರೋಪ ಎದುರಿಸುತ್ತಿರುವ ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯ್ಕ್ ಅವರನ್ನ ಗ್ರಾಮಸಭೆಯಿಂದ ದೂರ ಇಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಮುನ್ನೂರು ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ನಡೆದ ಗ್ರಾಮಸಭೆಯಲ್ಲಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ವೇದಿಕೆಯಲ್ಲಿ ಕುಳಿತಿದ್ದ ಪಿಡಿಒ ರವೀಂದ್ರ ಅವರನ್ನು ಸಭೆಯಿಂದ ದೂರ ಇಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಘೋಷಣೆ ಕೂಗದಂತೆ ತಡೆದಿದ್ದಾರೆ. ಪಟ್ಟು ಬಿಡದ ಕಿಸಾನ್ ಸಂಘದ ಸದಸ್ಯರು ಗ್ರಾಮಸಭೆ ಉದ್ದಕ್ಕೂ ನೆಲದಲ್ಲೇ ಕುಳಿತು ಮೌನ ಪ್ರತಿಭಟನೆ ನಡೆಸಿದ್ದಾರೆ.


ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿದ್ದ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಈಶ್ವರ್ ಅವರು ಪ್ರತಿಭಟನಾಕಾರರಲ್ಲಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡುವಂತೆ ಸಲಹೆ ನೀಡಿ ತಮಗೆ ನ್ಯಾಯ ಸಿಗಲಿ ಎಂದು ಹೇಳಿದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಪ್ರೇಮಚಂದ್ರ ಶೆಟ್ಟಿ ಮಾತನಾಡಿ ಕಳೆದ ವರ್ಷ ಜುಲೈ ತಿಂಗಳಲ್ಲಿ ಪಿಡಿಒ ರವೀಂದ್ರ ಮತ್ತು ಗ್ರಾಮ ಪಂಚಾಯತ್ ಸದಸ್ಯನೋರ್ವ ಸೇರಿ ಅಭಿವೃದ್ಧಿ ನೆಪದಲ್ಲಿ ಗ್ರಾಮ ವ್ಯಾಪ್ತಿಯ ಸರಕಾರಿ ಭೂಮಿಯಿಂದ ಸುಮಾರು ನಲ್ವತ್ತು ಲಕ್ಷ ರೂಪಾಯಿ ಮೌಲ್ಯದ ಮರಗಳನ್ನ ಕಡಿದು ಮಾರಾಟ ನಡೆಸಿದ್ದಾರೆ. ಈ ಬಗ್ಗೆ ಪಿಡಿಒ ವಿರುದ್ಧ ಅರಣ್ಯಾಧಿಕಾರಿಗಳು ಎಫ್ ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿದ್ದು ಜಾಮೀನಿನಲ್ಲಿ ಹೊರಗಿರುವ ರವೀಂದ್ರ ಅವರು ತಾನು ಈ ಕೇಸನ್ನ ಹೈಕೋರ್ಟಲ್ಲಿ ವಜಾ ಮಾಡಿರುವುದಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಮರ ಮಾರಾಟದ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು. ಅದಕ್ಕಾಗಿ ನಾವು ಸುಪ್ರೀಂ ಕೋರ್ಟ್ ಕದ ತಟ್ಟಲೂ ಸಿದ್ಧ ಎಂದರು.


ಎರಡೂ ಮುಕ್ಕಾಲು ಸೆಂಟ್ಸ್ ಸರಕಾರಿ ಜಾಗದಲ್ಲಿ ಮನೆ ಕಟ್ಟುವವರಿಗೆ ಡೋರ್ ನಂಬರ್ ನೀಡಲು ಪಂಚಾಯತಿನಲ್ಲಿ 30 ರಿಂದ ನಲ್ವತ್ತು ಸಾವಿರ ಡಿಮಾಂಡ್ ಮಾಡಲಾಗುತ್ತಿದೆ. ಹಕ್ಕುಪತ್ರ ನೀಡಲು 60 ಸಾವಿರ ಡಿಮಾಂಡ್ ಮಾಡಲಾಗುತ್ತಿದೆ ಎಂದವರು ಆರೋಪಿಸಿದರು.
Mangalore Forest department tress sold by PDO of Munnuru Gram Panchayath, Bharatiya Kisan Sangha members demand suspension
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm