ಬ್ರೇಕಿಂಗ್ ನ್ಯೂಸ್
02-09-23 09:12 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ರಾಜ್ಯದ ಉದ್ದಗಲಕ್ಕೂ ವ್ಯಾಪಿಸಿರುವ ಅಲೆಮಾರಿ ಜನಾಂಗದ ಜನರ ಸಂಕಷ್ಟದ ಬದುಕನ್ನು ಸ್ವತಃ ಅನುಭವಿಸಿ ಅವರ ಜತೆಗೂಡಿ ಸಣ್ಣ ಅವಧಿಯಲ್ಲಿ ಅವರ ಬದುಕಿಗೊಂದು ಕಾಯಕಲ್ಪ ಕೊಡಲು ಪ್ರಯತ್ನಿಸಿದ ರವೀಂದ್ರ ಶೆಟ್ಟಿಯವರ ಆಡಳಿತ ಅವಧಿಯ ಜೀವನ ಒಂದು ಕೃತಿಯಾಗಿ ಲೋಕಾರ್ಪಣೆಗೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ರಾಜ್ಯ ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆ ಸಹಯೋಗದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ರಚಿಸಿದ "ಅಲೆಮಾರಿ ಜೀವನ" ನೂತನ ಕೃತಿಯನ್ನ ಶುಕ್ರವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ರವೀಂದ್ರ ಶೆಟ್ಟಿಯರಿಗೆ ನಿಗಮದ ಅಧ್ಯಕ್ಷರಾಗಿ ಒಂದೂವರೆ ವರ್ಷ ಅಧಿಕಾರ ನಡೆಸುವ ಅವಕಾಶ ಸಿಕ್ಕಿದರೂ ಹಿಂದುಳಿದ ಅಲೆಮಾರಿ ಜನಾಂಗಕ್ಕೆ ಸರಕಾರದಿಂದ ದೊಡ್ಡ ಮಟ್ಟಿನ ನೆರವು ತೆಗಿಸಿಕೊಡಲು ಶ್ರಮ ಪಟ್ಟಿದ್ದರು. ಶೆಟ್ಟರ ಡೇರೆ ಮುಕ್ತ ಅಲೆಮಾರಿ ಜನಾಂಗದ ಕನಸು ಮುಂದಿನ ದಿನಗಳಲ್ಲಾದರೂ ನನಸಾಗಲಿ ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನಿರ್ದೇಶಕ ಕೆ.ಟಿ. ಸುವರ್ಣ, ಎಚ್ಎಂಎಸ್ ರಾಷ್ಟ್ರೀಯ ಉಪಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ, ಕಸಾಪ ಉಳ್ಳಾಲ ಘಟಕ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ, ದ.ಕ ಅಲೆಮಾರಿ ಒಕ್ಕೂಟ ಅಧ್ಯಕ್ಷ ಡಾ. ಕೇಶವನಾಥ್, ಅಲೆಮಾರಿ, ಅರೆ ಅಲೆಮಾರಿ ನಿಗಮದ ನಾಮ ನಿರ್ದೇಶಿತ ಸದಸ್ಯ ಅನಂತಕೃಷ್ಣಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್, ಕಸಾಪ ಜಿಲ್ಲಾಧ್ಯಕ್ಷ ಡಾ.ಶ್ರೀನಾಥ್, ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯ ಅಲೆಮಾರಿ ಅರೆ ಅಲೆಮಾರಿ ಜನಾಂಗದ ಒಕ್ಕೂಟದ ಪ್ರಧಾನ ಸಂಚಾಲಕ, ಪತ್ರಕರ್ತ ಪ್ರಕಾಶ್ ಎಂ. ಕೃತಿ ಪರಿಚಯ ಮಾಡಿದರು.
Former President of State Sahitya Parishat Dharmadarshi Harikrishna Punalur said that it is indeed commendable that the life of Ravindra Shetty, who personally experienced the plight of the nomadic tribes spread across the state and tried to give life to them in a short span of time, has been released as a book.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm