ಬ್ರೇಕಿಂಗ್ ನ್ಯೂಸ್
08-11-20 07:27 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಹಂಪನಕಟ್ಟೆ ಸುತ್ತಮುತ್ತ ನ.8ರಿಂದ 2021ರ ಜನವರಿ 6ರ ವರೆಗೆ ವಾಹನ ಸಂಚಾರ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹಂಪನಕಟ್ಟೆ ಕಡೆಯಿಂದ ನವಭಾರತ ವೃತ್ತದ ಕಡೆಗೆ ಏಕಮುಖ ವಾಹನ ಸಂಚಾರ ಇರಲಿದೆ. ನವಭಾರತ್ ಸರ್ಕಲ್ ಕಡೆಯಿಂದ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಂಪನಕಟ್ಟೆ ಕಡೆಯಿಂದ ಬಾವುಟಗುಡ್ಡೆ, ಫಳ್ನೀರ್ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಕೆ.ಎಸ್. ರಾವ್ ರಸ್ತೆಯ ಮೂಲಕ ಪಿವಿಎಸ್ ಕಡೆಗೆ ಹಾಗೂ ಅಂಬೇಡ್ಕರ್ ವೃತ್ತ ಮೂಲಕ ಮುಂದುವರೆಯಬೇಕು.
ಅಂಬೇಡ್ಕರ್ ವೃತ್ತದ ಕಡೆಯಿಂದ ಹಂಪನಕಟ್ಟೆ ಕಡೆಗೆ ಬರುವ ಎಲ್ಲ ವಾಹನಗಳು ಬಲ್ಮಠ ರಸ್ತೆಯಲ್ಲಿರುವ ಅರವಿಂದ ಮೋಟಾರ್ಸ್ ಶೋರೂಂ ಎದುರಿನ ಮಿಲಾಗ್ರಿಸ್ ಕ್ರಾಸ್ ರಸ್ತೆ ಮೂಲಕ ಫಳ್ನೀರು ರಸ್ತೆ ಪ್ರವೇಶಿಸಿ ವೆನ್ಲಾಕ್ ಆಸ್ಪತ್ರೆಯ ಅಂಡರ್‌ಪಾಸ್ ರಸ್ತೆಯ ಮೂಲಕ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ತಾಲೂಕು ಪಂಚಾಯತ್ ಕಚೇರಿ ಪಕ್ಕದ ಯು.ಪಿ. ಮಲ್ಯ ರಸ್ತೆಯ ಮೂಲಕ ಎ.ಬಿ. ಶೆಟ್ಟಿ ಸರ್ಕಲ್ ಕಡೆಗೆ ತೆರಳಬೇಕು.
ಮಿಲಾಗ್ರಿಸ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ರೈಲ್ವೆ ಸ್ಟೇಷನ್‌ನಿಂದ ವೆನ್ಲಾಕ್ ಆಸ್ಪತ್ರೆಯ ಅಂಡರ್ ಪಾಸ್ ರಸ್ತೆ ಮೂಲಕ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ವೃತ್ತದ ಕಡೆಯಿಂದ ಬಾವುಟಗುಡ್ಡೆ ಕಡೆಗೆ ವಾಹನಗಳ ದ್ವಿಮುಖ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಈ ನಿರ್ಬಂಧ ಪೊಲೀಸ್ ವಾಹನ ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಇಡೀ ಹಂಪನಕಟ್ಟೆ ಪ್ರದೇಶದಲ್ಲಿ ದಿಢೀರ್ ವಾಹನ ಸಂಚಾರ ಸ್ಥಗಿತಗೊಳಿಸಿ ಆದೇಶ ಮಾಡಿರುವುದು ಅಲ್ಲಿನ ಪ್ರದೇಶದ ನಿವಾಸಿಗಳಿಗೆ ಕಷ್ಟವಾಗಿದೆ. ರಸ್ತೆ ಬಂದ್ ಮಾಡಿರುವ ವಿಚಾರ ತಿಳಿಯದೆ ಬಾವುಟಗುಡ್ಡೆಯ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ.
In an order issued by city police commissioner Vikash Kumar on Saturday, November 7, vehicular traffic will be prohibited in areas around Hampankatta from November 8 to January 6, 2021, due to road concreting and underground drainage work.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm