ಬ್ರೇಕಿಂಗ್ ನ್ಯೂಸ್
03-09-23 09:45 pm Mangalore Correspondent ಕರಾವಳಿ
ಮಂಗಳೂರು, ಸೆ.3: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ, ಲೇಖಕ, ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿ ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ, ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರಾಗಿ, ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರ ಬರವಣಿಗೆಯಲ್ಲಿ ತೊಡಗಿಸಿಕೊಂಡವರು. ರಾಜ್ಯದ ವಿವಿಧ ಟಿ.ವಿ. ಮಾಧ್ಯಮಗಳಲ್ಲಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ. ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಫಿಲೋಮಿನಾ ಹೈಸ್ಕೂಲ್ ಹಾಗೂ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎಂ.ಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು. ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.
Mangalore Chandra poojari appointed as state higher education academy director of Karnataka.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm