ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.
ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm