ಬ್ರೇಕಿಂಗ್ ನ್ಯೂಸ್
09-11-20 01:31 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 09 : ಕೊರೋನಾ ಹೆಸರಲ್ಲಿ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಯಿಂದ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ, ಜಯಂತಿ ಮೋಸ ಹೋದ ಮಹಿಳೆ. ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಾಪಸ್ ಹೋಗುತ್ತಿದ್ದ ಜಯಂತಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಪರಿಚಯ ಮಾಡಿಕೊಂಡಿದ್ದಾನೆ. ತಾನು, ಶೀನಪ್ಪ ಅವರ ಮಗ ಸಂತೋಷ್ ಎಂದು ಹೇಳಿ ನಂಬಿಸಿದ್ದಾನೆ. ನಿಮಗೆ ಕೊರೋನಾ ಹೆಸರಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು ಹತ್ತು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದ್ದಲ್ಲದೆ ಅರ್ಜಿ ತುಂಬಿಸಲೆಂದು ಮಹಿಳೆಯನ್ನು ಮಿನಿ ವಿಧಾನಸೌಧಕ್ಕೆ ಕರೆದೊಯ್ದಿದ್ದಾನೆ. ಹಣ ಕೇಳಿದ್ದಕ್ಕೆ ಮಹಿಳೆ ಈಗ ನನ್ನಲ್ಲಿ ಹಣ ಇಲ್ಲ ಎಂದಿದ್ದಾರೆ. ಮಗನಿಗೆ ಕರೆ ಮಾಡಿ ಹಣ ಇದೆಯಾ ಎಂದು ಕೇಳುತ್ತೇನೆ ಎಂದಿದ್ದು, ಅದಕ್ಕೆ ಯುವಕ, ಮಗನಿಗೆ ನಾನು ಆಗಲೇ ಕರೆ ಮಾಡಿ ಕೇಳಿದ್ದೇನೆ. ಆತ ಇಲ್ಲ ಎಂದಿದ್ದಾನೆ. ತಾಯಿಯಲ್ಲಿ ಹಣ ಇಲ್ಲದಿದ್ದರೆ ಅವರ ಚಿನ್ನ ಪಡೆದು ಹಣ ತೆಗೆಯುವಂತೆ ಹೇಳಿದ್ದಾನೆಂದು ಅಪರಿಚಿತ ವ್ಯಕ್ತಿ ಮಹಿಳೆಯನ್ನು ನಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿದ ಮಹಿಳೆ ಕಿವಿಯಲ್ಲಿದ್ದ ಬೆಂಡೋಲೆ ತೆಗೆದು ಕೊಟ್ಟಿದ್ದಾರೆ. ಚಿನ್ನ ಪಡೆದ ವ್ಯಕ್ತಿ ನೀವು ಇಲ್ಲೇ ಕುಳಿತುಕೊಳ್ಳಿ ಎಂದು ಹೇಳಿ ಹೋದವನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೊನೆಗೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿ ಮೂಲಕ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಸ್ಥಳಕ್ಕೆ ಬಂದ ಅವರ ಮಗ ತಾಯಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಹೋಗಿ ದೂರು ನೀಡಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಸಿ.ಸಿ. ಕ್ಯಾಮರ ದೃಷ್ಯ ಆಧರಿಸಿ, ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
In an incident that occurred on the morning of Monday, November 9, a financially poor woman lost her gold as she was fooled by fraudsters saying that she has got ‘Corona’ money in her name but need to pay fee in order to get the same and made good with her gold.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm