ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.
ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm