ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm