ಬ್ರೇಕಿಂಗ್ ನ್ಯೂಸ್
11-09-23 09:11 pm Mangalore Correspondent ಕರಾವಳಿ
ಮಂಗಳೂರು, ಸೆ.11: ಹೆಣ್ಮಕ್ಕಳಿಗೆ ಮುಟ್ಟು ಎನ್ನುವುದು ಹಿಂದಿನ ಕಾಲದಲ್ಲಿ ಅಪವಿತ್ರ ಎನ್ನುವ ಕಲ್ಪನೆ ಇತ್ತು. ಅವರನ್ನು ಪ್ರತ್ಯೇಕ ಇರಿಸುವ, ಪವಿತ್ರ ಕಾರ್ಯಗಳಿಂದ ದೂರವಿಡುತ್ತಿದ್ದ ಪದ್ಧತಿ ಇತ್ತು. ಸಮಾಜದಲ್ಲಿ ಯಾಕೆ ಆ ರೀತಿಯ ಕಲ್ಪನೆ ಇತ್ತೆಂದು ಗೊತ್ತಿಲ್ಲ. ಆದರೆ ಈಗ ಅಂತಹ ಸ್ಥಿತಿ ಇಲ್ಲ. ಮುಟ್ಟಿನ ಸಂದರ್ಭದಲ್ಲಿಯೂ ಹೆಣ್ಮಕ್ಕಳು ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಟ್ಟು ಅಪವಿತ್ರ ಎನ್ನುವ ಭಾವನೆ ಹೋಗಲಾಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೈತ್ರಿ ಮುಟ್ಟಿನ ಕಪ್ ಗಳನ್ನು ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ವಿತರಣೆ ಮಾಡಲಾಯಿತು.




ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ರಾಯಭಾರಿ ಆಗಿದ್ದಾರೆ. ಕಾರ್ಯಕ್ರಮದಲ್ಲಿ ಸಪ್ತಮಿ ಗೌಡ ಮುಖ್ಯ ಆಕರ್ಷಣೆಯಾಗಿದ್ದು ಮುಟ್ಟಿನ ಕಪ್ ಬಗ್ಗೆ ಅನಿಸಿಕೆ ಹೇಳಿಕೊಂಡರು. ಪೀರಿಯಡ್ಸ್ ಸಮಯದಲ್ಲಿ ಪ್ಯಾಡ್ ಬಳಸಿದಲ್ಲಿ ಅದನ್ನು ವಿಲೇವಾರಿ ಮಾಡುವುದೇ ಸವಾಲು. ಆದರೆ ಮೈತ್ರಿ ಮುಟ್ಟಿನ ಕಪ್ ಉಪಯೋಗಿಸಿದಲ್ಲಿ ಮರು ಬಳಕೆ ಮಾಡಬಹುದು. ಜೊತೆಗೆ, ಪರಿಸರ ಸ್ನೇಹಿಯಾಗಿದೆ. ಇದರಿಂದ ಪರಿಸರಕ್ಕೆ ಹಾನಿಯಿಲ್ಲ. ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಮಕ್ಕಳು ಬಳಸಿಕೊಳ್ಳಬೇಕು. ನಾನು ಬೇಸಿಕಲೀ ಈಜು ಪಟು. ನೇಶನಲ್ ಚಾಂಪಿಯನ್ ಆಗಿದ್ದೆ. ನನಗೆ ಯಾವತ್ತೂ ಮುಟ್ಟಿನ ವಿಷಯ ಕ್ರೀಡೆಗೆ ತೊಂದರೆ ಆಗಿಲ್ಲ ಎಂದರು.



ಕಾರ್ಯಕ್ರಮದಲ್ಲಿ ಸ್ಪೀಕರ್ ಯುಟಿ ಖಾದರ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್.ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ. ಭಾಗವಾಹಿಸಿದ್ದರು.
Minister for Health and Family Welfare Dinesh Gundu Rao said that the government will resume distribution of free sanitary pads to about 40 lakh girl students aged between 10 and 18 years, enrolled in schools and colleges across Karnataka, from October.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm