ಬ್ರೇಕಿಂಗ್ ನ್ಯೂಸ್
12-09-23 10:31 pm Mangalore Correspondent ಕರಾವಳಿ
ಮಂಗಳೂರು, ಸೆ.12: ಬಸ್ಸಿಗೆ ಹತ್ತುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ 66 ವರ್ಷದ ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದ್ರೆ ಬಳಿಯ ಮಾರೂರು ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮೊಮ್ಮಗ ಕಾಲೇಜು ತೆರಳುತ್ತಿದ್ದಾಗ, ಅಜ್ಜಿ ನೀಲಮ್ಮ (66) ಅವರೂ ಆಸ್ಪತ್ರೆಗೆ ತೆರಳುವುದಕ್ಕಾಗಿ ಜೊತೆಗೆ ಬಂದಿದ್ದರು. ಮಾರೂರು ಗ್ರಾಮದ ಕುಂಟೋಡಿ ಎಂಬಲ್ಲಿ ಮೂಡುಬಿದ್ರೆಗೆ ತೆರಳುವ ಖಾಸಗಿ ಬಸ್ಸಿಗೆ ಹತ್ತಿದ್ದಾರೆ. ಆದರೆ, ಮುಂದಿನ ಬಾಗಿಲಿನಿಂದ ನೀಲಮ್ಮ ಬಸ್ ಹತ್ತುತ್ತಿದ್ದಾಗಲೇ ಚಾಲಕನ ಬಸ್ಸನ್ನು ವೇಗವಾಗಿ ಮುಂದಕ್ಕೆ ಚಲಿಸಿದ್ದರಿಂದ ಬಾಗಿಲು ಇಲ್ಲದ ಕಾರಣ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡಿದ್ದ ನೀಲಮ್ಮ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಾಗಲೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಬಸ್ ಸಿಬಂದಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು ಆರ್ ಟಿಓ ವಶಕ್ಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಬಸ್ಸಿನ ಮುಂದಿನ ಬಾಗಿಲಲ್ಲಿದ್ದ ಬಸ್ಸಿನ ನಿರ್ವಾಹಕರೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಎಲ್ಲ ಬಸ್ ಮಾಲಕರನ್ನು ಕರೆದು ಬಸ್ಸಿಗೆ ಡೋರ್ ಅಳವಡಿಸುವುದಲ್ಲದೆ, ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು.
Moodbidri accident, 66 year old women thrown out of bus due to over speed, dies on spot in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm