ಬ್ರೇಕಿಂಗ್ ನ್ಯೂಸ್
14-09-23 06:22 pm Mangalore Correspondent ಕರಾವಳಿ
ಮಂಗಳೂರು, ಸೆ.14: ಈ ಬಾರಿ ಮಾನ್ಸೂನ್ ಪೂರ್ವದಲ್ಲಿ ಮಳೆ ವಿಫಲವಾದಾಗ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಈಗ ಬರಗಾಲ ಘೋಷಣೆಯಲ್ಲು ವಿಳಂಬ ಮಾಡಿದ್ದಾರೆ. ಸರ್ಕಾರ ವರದಿ ಪಡೆಯುವಲ್ಲಿ ವಿಳಂಬ ಮಾಡುತ್ತಿದೆ. ಈಗ ಮುಂಗಾರು ಹೋಗಿದೆ, ರೈತರಿಗೆ ಸಹಾಯ ಮಾಡೋದಕ್ಕು ಆಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬರ ಪರಿಹಾರಕ್ಕು ಮೊದಲು ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ಇವರು ಕೊಡಬೇಕು. ನಮ್ಮ ಅವಧಿಯಲ್ಲಿ ಪ್ರವಾಹ ಸಂದರ್ಭದಲ್ಲಿ ಒಂದು ತಿಂಗಳಲ್ಲೇ ಪರಿಹಾರ ಕೊಟ್ಟಿದ್ದೇವೆ. ನಾವು ಕೇಂದ್ರದ ಮಾನದಂಡಕ್ಕೂ ಕಾಯಲಿಲ್ಲ, ಆದರೆ ಇವರು ಕೇಂದ್ರದ ಮಾನದಂಡ ಅಂತಿದಾರೆ. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮನೋಭಾವ ಈ ಸರಕಾರಕ್ಕೆ ಇಲ್ಲ. ಕುಂಟು ನೆಪ ಹೇಳಿಕೊಂಡು ಸರ್ಕಾರ ಕಾಲ ಕಳೀತಿದೆ ಎಂದರು.
ಕಾವೇರಿ ವಿಚಾರದಲ್ಲಿ ಮೊದಲಿನಿಂದಲೂ ನಾವು ಹೇಳಿಕೊಂಡು ಬಂದಿದ್ದೇವೆ. ತಮಿಳುನಾಡಿನ ಡ್ಯಾಮ್ ಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ. ಆದರೂ ರಾಜ್ಯ ಸರ್ಕಾರ ನೀರು ಬಿಡ್ತಾ ಇತ್ತು. ಈ ವಿಚಾರವನ್ನು ಕಾನೂನಾತ್ಮಕ ರೀತಿ, ಗಂಭೀರವಾಗಿ ತೆಗೆದುಕೊಂಡು ಸರ್ಕಾರ ಹೋರಾಟ ಮಾಡ್ತಾ ಇಲ್ಲ. ಜಲಾಶಯದಲ್ಲಿ ನೀರು ಖಾಲಿಯಾಗಿರುವುದರಿಂದ ಕಾವೇರಿ ಜಲಾನಯನ ಭಾಗದ ರೈತರು ಮತ್ತು ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಕಷ್ಟ ಆಗಲಿದೆ. ಇವತ್ತು ಕಾನೂನಾತ್ಮಕ ಹೋರಾಟ ಮಾಡೋದು ಮತ್ತು ತಮಿಳುನಾಡನ್ನ ಒಪ್ಪಿಸೋದು ಅಷ್ಟೇ ಪರಿಹಾರ.
ಆದರೆ ನಮ್ಮ ಸಿಎಂ ತಮಿಳುನಾಡಿನ ಸ್ಟಾಲಿನ್ ಅವರ ಜೊತೆಗೆ ಮಾತನಾಡೋಕೇ ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳ್ತಾರೆ, ಇವರು ನಮ್ಮ ನೀರಿನ ಹಕ್ಕಿನ ಬಗ್ಗೆ ತಮ್ಮವರ ಜೊತೆಗೇ ಮಾತನಾಡಲ್ಲ. ಸದ್ಯ ನೀರು ಬಿಡಲ್ಲ ಅನ್ನುವ ತಮ್ಮ ನಿಲುವಿಗೆ ಮುಖ್ಯಮಂತ್ರಿ ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ತೇವೆ. ಒಂದು ವೇಳೆ ಕಾವೇರಿ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
The government should have woken up when the pre-monsoon rains failed this time. Now they have delayed the declaration of drought. The government is delaying getting the report. Former Chief Minister Basavaraj Bommai said that the monsoon is over and it is not possible to help the farmers.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm