ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm