ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm