ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm