ಬ್ರೇಕಿಂಗ್ ನ್ಯೂಸ್
20-09-23 02:13 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮೂವರು ಡಿಸಿಎಂ ಮಾಡಿದ್ರೆ ತಪ್ಪೇನಿಲ್ಲ, ಆದರೆ ಅದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇದನ್ನ ಬಹಿರಂಗವಾಗಿ ಚರ್ಚೆ ಮಾಡುವ ಅಗತ್ಯ ಇಲ್ಲ. ಈ ಬಗ್ಗೆ ಸಿ.ಟಿ.ರವಿ ಸಲಹೆ ಬೇಕಿಲ್ಲ. ಅವರು ಸೋತು ಸುಣ್ಣ ಆಗಿದ್ದಾರೆ, ಸುಮ್ಮನಿದ್ದರೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸಿಟಿ ರವಿ ಅವರನ್ನು ವಿಧಾನಸಭೆಯಿಂದಲೂ ಜನ ಮನೆಗೆ ಕಳಿಸಿದ್ರು, ದೆಹಲಿಯಿಂದಲೂ ಪಕ್ಷದವರೇ ವಾಪಸ್ ಕಳಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಅನವಶ್ಯಕವಾಗಿ ಬಾಯಿ ತೆಗೆಯೋದು ಸರಿಯಲ್ಲ. ಅವರಿಗೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ. ಅವರಿಗೆ ಸುದ್ದಿಯಲ್ಲಿ ಇರಬೇಕು ಅನ್ನೋದು ಹವ್ಯಾಸ ಆಗಿದೆ. ಹಾಗೆ ಏನೇನೋ ಹೇಳುತ್ತಿದ್ದಾರೆ ಎಂದರು.

ಚುನಾವಣಾ ಪೂರ್ವದಲ್ಲಿಯೂ ನಮ್ಮಲ್ಲಿ ಒಗ್ಗಟ್ಟಿಲ್ಲ ಅಂತ ಹೇಳಿದ್ದರು. ಆದರೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಕೊನೆಗೆ ಏನಾಯ್ತು ಅಂತ ಗೊತ್ತಿದೆ. ಈಗಲೂ ಒಗ್ಗಟ್ಟಲ್ಲಿ ಇದ್ದೇವೆ, ರಾಜಕೀಯ ತೀರ್ಮಾನ ವರಿಷ್ಠರು ಮಾಡ್ತಾರೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ಸರಿಯಾಗಿ ಇದ್ದೇವೆ ಎಂದರು.
ಕಾವೇರಿ ವಿಚಾರದಲ್ಲಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಿದೆ. ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಮುಂದುವರಿಯಬೇಕಿದೆ. ಈ ಸಲ ಮಳೆ ಕೂಡ ಕಡಿಮೆಯಾಗಿದ್ದು ನಮ್ಮಲ್ಲೇ ನೀರು ಇಲ್ಲದಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ರಾಜಕೀಯವಾಗಿಯೂ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸಬೇಕಾಗಿದೆ. ನಮ್ಮ ರಾಜ್ಯದ ಸಂಸದರು ದೆಹಲಿಯಲ್ಲಿ ಮಾತನಾಡಬೇಕಿದೆ. ಈಗಾಗಲೇ ಸಿಎಂ ಪ್ರಧಾನಿ ಮೋದಿಯವರ ಸಮಯ ಕೇಳಿದ್ದಾರೆ. ಕೋರ್ಟ್ ಗಳು ಆದೇಶ ಕೊಡ್ತದೆ, ಆದರೆ ಕೆಲವು ವಿಚಾರಗಳಲ್ಲಿ ನಾವು ಜನರ ಪರ ನಿಲ್ಲಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಕುರಿತ ಪ್ರಶ್ನೆಗೆ, ಹುಕ್ಕಾ ಬಾರ್ ಗಳಿಂದ ಸಾರ್ವಜನಿಕರಿಗೆ ಅನಾರೋಗ್ಯ ಆಗ್ತಿದೆ. ಹೀಗಾಗಿ ನಮ್ಮ ಕಾಯಿದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ. ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗಿದೆ. ಅದರಲ್ಲಿ ಬೇರೆ ಮಿಶ್ರಣ ಮಾಡಿ ಹಾಕುವಂಥದ್ದು ಇದೆ. ಇಂಥದ್ದನ್ನ ನಿಯಂತ್ರಣ ಮಾಡೋದು ಬಹಳ ಕಷ್ಟ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇಂತಹದ್ದು ಇರಬಾರದು. ಬಾರ್, ರೆಸ್ಟೋರೆಂಟ್ ಪರಿಸರದಲ್ಲಿ ಇವೆಲ್ಲ ಇರದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
Dinesh Gundu Rao slams CT Ravi says better he shuts up as he is even thrown from Delhi by BJP party.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm