ಬ್ರೇಕಿಂಗ್ ನ್ಯೂಸ್
20-09-23 04:06 pm Mangalore Correspondent ಕರಾವಳಿ
ಮಂಗಳೂರು, ಸೆ.19: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ಎಎಸ್ಐಗಳಿಗೆ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ಎಸ್ಐ ಆಗಿ ನಿಯೋಜನೆಗೊಂಡಿದ್ದಾರೆ.

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಗುಪ್ತಚರ ವಿಭಾಗದ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಕರಾವಳಿ ಕಾವಲು ಪಡೆಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ ಬಿ ವಿಭಾಗದ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಎಎಸ್‌ಐಗಳಿಗೆ ಭಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಭಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.
16 Police ASIs ppromoted to PSI at Mangalore by Commissioner Anupam Agrawal. Many Assistant police inspectors had waited for their promotion for many years. After taking charge as the police commissioner of Mangaluru city, Anupam Agrawal made it possible, and within 9 days of taking charge, he promoted 16 Assistant Sub Inspectors to Police Sub Inspectors.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm