ಸತತ ಮಳೆ - ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆ ಸಾಧ್ಯತೆ

06-08-20 08:32 am       Mangalore Reporter   ಕರಾವಳಿ

ಸತತ ಮಳೆಯಿಂದಾಗಿ ಕರಾವಳಿಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಸಮಾನಂತರವಾಗಿ ನೀರು ಹರಿಯುತ್ತಿದ್ದು, ಮುಳುಗಡೆ ಭೀತಿ ಎದುರಾಗಿದೆ.

ಬೆಳ್ತಂಗಡಿ: ಸತತ ಮಳೆಯಿಂದಾಗಿ ಕರಾವಳಿಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸ್ನಾನಘಟ್ಟದ ಸಮೀಪದ ಅಣೆಕಟ್ಟು ಸಮಾನಂತರವಾಗಿ ನೀರು ಹರಿಯುತ್ತಿದ್ದು, ಮುಳುಗಡೆ ಭೀತಿ ಎದುರಾಗಿದೆ.

ಈ ವರ್ಷದ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಮಳೆಯಾಗಿದ್ದರಿಂದ ನದಿ ನೀರು ಗರಿಷ್ಠ ಏರಿಕೆಯಾಗಿದೆ

ನಿರಂತರ ಮಳೆಯಾದಲ್ಲಿ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷವೂ ಇದೇ ಸಂದರ್ಭದಲ್ಲಿ ಮಳೆ ಸುರಿದಿದ್ದ ಪರಿಣಾಮ ಇಲ್ಲಿ ಅತೀವ ಹಾನಿಯಾಗಿತ್ತು.

ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಭಾರಿ ಮಳೆಯಾಗುತ್ತಿದ್ದು, ಘಾಟಿಯ 2 ಮತ್ತು 3ನೇ ತಿರುವಿನಲ್ಲಿ ನಿನ್ನೆ ಸಂಜೆ ಉರುಳಿದ ಬಂಡೆ ಸರಿಸಲಾಗಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬುಧವಾರ ರಾತ್ರಿ ಧರ್ಮಸ್ಥಳ ಠಾಣೆ ಎಸ್.ಐ. ಪವನ್ ಕುಮಾರ್ ನೇತೃತ್ವದಲ್ಲಿ ತೆರವು ಕಾರ್ಯ ನಡೆದಿದೆ.

ಬಣಕಲ್ ವ್ಯಾಪ್ತಿಯಲ್ಲಿ ತಡ ರಾತ್ರಿ ಸಣ್ಣಪುಟ್ಟ ಕುಸಿತ ಉಂಟಾಗಿದ್ದು ಮೂಡಿಗೆರೆ ವ್ಯಾಪ್ತಿಗೆ ಮಾಹಿತಿ ನೀಡಿ ತೆರವುಗೊಳಿಸಲಾಗಿದೆ. ವಾಹನ ಸಂಚಾರಕ್ಕೆ ಅನುವು ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.