ಬ್ರೇಕಿಂಗ್ ನ್ಯೂಸ್
22-09-23 09:10 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ನಳಿನ್ ಕುಮಾರ್ ಶುಕ್ರವಾರ ತುರ್ತಾಗಿ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾಗಿ ಸಂಸದರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಬೆಂಗಳೂರು- ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಕೇಳಿಕೊಂಡಿರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ರೈಲ್ವೇ ಸಚಿವರನ್ನು ಇದೇ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಒತ್ತಾಯಿಸಿದ್ದಾರೆ, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದಲ್ಲದೆ, ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯದಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಪುತ್ತೂರು - ಸುಬ್ರಹ್ಮಣ್ಯ ರಸ್ತೆಯಲ್ಲಿ ಪ್ಯಾಸೆಂಜರ್ ರೈಲು ಒದಗಿಸಬೇಕೆಂಬ ಮನವಿಗೂ ಸಚಿವರು ಒಪ್ಪಿಗೆ ನೀಡಿದ್ದಾರಂತೆ.
ಅಲ್ಲದೆ, ರೈಲ್ವೇ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಲ್ಲಿರುವ ಮಂಗಳೂರು ರೈಲು ನಿಲ್ದಾಣವನ್ನು ನೈರುತ್ಯ ರೈಲ್ವೇಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಸಂಸದರ ಮನವಿಗೆ ರೈಲ್ವೇ ಸಚಿವರು ಈಗಾಗಲೇ ಈ ಕುರಿತು ಅಗತ್ಯ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ರೈಲ್ವೇ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ತಪ್ಪಿಸಲು ಸಂಸದರು ಸಚಿವರ ಗಮನ ಸೆಳೆದಿದ್ದಾರೆ. ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ಸಂಸದರ ಕಚೇರಿಯ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಒಂಬತ್ತು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಕೇರಳದ ಕಾಸರಗೋಡಿನಿಂದ ತಿರುವನಂತಪುರಕ್ಕೆ ಮತ್ತೊಂದು ರೈಲು ನೀಡಿರುವುದು ಮಂಗಳೂರಿನ ವಂದೇ ಭಾರತ್ ರೈಲು ಬೇಡಿಕೆಗೆ ದೊಡ್ಡ ಹಿನ್ನಡೆಯಾಗಿತ್ತು. ಜನರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಮತ್ತೆ ರೈಲ್ವೇ ಸಚಿವರನ್ನು ಭೇಟಿಯಾಗಿ ಮತ್ತೊಮ್ಮೆ ಮನವಿ ಸಲ್ಲಿಸಿದ್ದಾರೆ.
October end Vande Bharat to be introduced from Mangalore to Goa, MP Nalin Kateel meets Railway Minister.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm