ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
24-05-25 03:19 pm
HK News Desk
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 12:41 pm
Mangalore Correspondent
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm