ಬ್ರೇಕಿಂಗ್ ನ್ಯೂಸ್
25-09-23 09:38 pm Mangalore Correspondent ಕರಾವಳಿ
ಮಂಗಳೂರು, ಸೆ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವುಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಪುರಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಅರ್ಜಿಗಳಿಗೆ ಸಕಾಲಕ್ಕೆ ಪರಿಹಾರ ನೀಡುವ ಮೂಲಕ ಜನರಿಗೆ ಸ್ಪಂದಿಸಬೇಕು. ಆಗ ಮಾತ್ರ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದೆ ಎನ್ನುವ ಭಾವನೆ ಬರುತ್ತದೆ, ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಚಿವರು ಸಭೆಯ ಬಳಿಕ ಕಿವಿಮಾತು ಹೇಳಿದರು.
ಸ್ವೀಕರಿಸಿದ ಎಲ್ಲ 366 ಅರ್ಜಿಗಳಿಗೆ ಯಾವ ಕ್ರಮ ವಹಿಸಬೇಕೆಂಬುದನ್ನು ಅರ್ಜಿ ಮೇಲೆ ನಮೂದಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲೂ ಜನತಾ ದರ್ಶನ ಮಾಡಲಾಗುವುದು, ಇದರ ಮುಖ್ಯ ಉದ್ದೇಶ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಕೊಡುವುದು ಹಾಗೂ ಅವರ ಕಾನೂನು ಬದ್ದ ಬೇಡಿಕೆಯನ್ನು
ಈಡೇರಿಸುವುದಾಗಿದೆ, ಇಲ್ಲಿ ವಿಳಂಬ ಆಗಬಾರದು, ಜನರ ಕೆಲಸ ಕಾರ್ಯಗಳಿಗೆ ಅವರನ್ನು ವೃಥಾ ಓಡಾಡಿಸಬಾರದು, ಜನರಿಗೆ ಕಿರುಕುಳ, ತೊಂದರೆ ಆಗದಂತೆ ಕ್ರಮ ವಹಿಸಬೇಕು ಎಂದರು.
ಮುಖ್ಯಮಂತ್ರಿಗಳು ಈ ಜನ ಸ್ಪಂದನ ಕಾರ್ಯಕ್ರಮವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ತೆಗೆದುಕೊಂಡಿದ್ದು, ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಯತ್ನಿಸಿದ್ದಾರೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ.ಆನಂದ್, ನಗರ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್, ಎಸ್ಪಿ ರಿಷ್ಯಂತ್ ಸಿ.ಬಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನೂರಾರು ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರದ ಕಾರ್ಯಕ್ರಮ ಆಗಿದ್ದರೂ ಜಿಲ್ಲೆಯ ಬಿಜೆಪಿ ಶಾಸಕರು ಜನತಾ ದರ್ಶನಕ್ಕೆ ಬಾರದೆ ದೂರ ಉಳಿದಿದ್ದರು.
60ಕ್ಕೂ ಹೆಚ್ಚು ಇಲಾಖೆ, 14 ಕೌಂಟರ್, ಅರ್ಜಿಗಳಿಗೆ ನಂಬರ್
ಸಾರ್ವಜನಿಕರ ಸಮಸ್ಯೆಗಳನ್ನು ನೋಂದಾಯಿಸಲು ತೆರೆಯಲಾಗಿದ್ದ ಸುಮಾರು 60ಕ್ಕೂ ಹೆಚ್ಚು ಇಲಾಖೆಗಳ 14 ಕೌಂಟರ್ ಗಳಿಗೆ ಸೋಮವಾರ ಬೆಳಗ್ಗೆ ಬಂದ ಕೂಡಲೇ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಕಂದಾಯ, ಮೀನುಗಾರಿಕೆ, ಆಹಾರ, ಕೃಷಿ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ಕಾರ್ಮಿಕ, ಕಂದಾಯ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಆರೋಗ್ಯ ಹೀಗೆ ಪ್ರಮುಖ ಇಲಾಖೆಗಳ ಮಳಿಗೆ ಹಾಕಲಾಗಿತ್ತು. ಸಾರ್ವಜನಿಕರ ಅರ್ಜಿಗಳಿಗೆ ನಂಬರ್ ದಾಖಲಿಸಿ ಕಂಪ್ಯೂಟರ್ ನಲ್ಲಿ ಫೀಡ್ ಮಾಡಲಾಗುತ್ತಿತ್ತು. ನೇರವಾಗಿ ಬಗೆಹರಿಸುವ ಅರ್ಜಿಗಳನ್ನು ಉಸ್ತುವಾರಿ ಸಚಿವರ ಬಳಿಗೆ ಕಳಿಸಿ ಕೊಡಲಾಗುತ್ತಿತ್ತು.
ಸಿದ್ದರಾಮಯ್ಯ ಸರ್ಕಾರದ ಹೊಸ ಕಾರ್ಯಕ್ರಮ ಜನತಾ ದರ್ಶನ
ಈ ಹಿಂದೆ ಸಿದ್ದರಾಮಯ್ಯ, ಅದಕ್ಕೂ ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ ಸಿಎಂ ಜನತಾ ದರ್ಶನ ಎನ್ನುವ ಕಾರ್ಯಕ್ರಮ ಆರಂಭಿಸಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಮತ್ತು ಬೆಂಗಳೂರಿನಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿದ್ದರು. ಆದರೆ ಈ ಬಾರಿ ಸಿಎಂ ಸಿದ್ದರಾಮಯ್ಯ ಏಕಕಾಲದಲ್ಲಿ ರಾಜ್ಯಾದ್ಯಂತ ಜನತಾ ದರ್ಶನ ಕಾರ್ಯಕ್ರಮ ಮಾಡಿದ್ದು ಪ್ರತಿ ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರ ಮೂಲಕವೇ ಜನರ ಸಮಸ್ಯೆ ನಿವಾರಣೆಗೆ ಮುತುವರ್ಜಿ ವಹಿಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ಜನತಾ ದರ್ಶನ ಮಾಡಿದ್ದರೂ, ಜಿಲ್ಲೆಯ ಮಟ್ಟದಲ್ಲಿ ಕಾರ್ಯಕ್ರಮ ಮಾಡಿರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಬದಲಾದ ಆಡಳಿತವನ್ನು ಜನರಿಗೆ ತಲುಪಿಸಲು ದಿಟ್ಟ ಹೆಜ್ಜೆ ಇರಿಸಿದ್ದಾರೆ.
Mangalore in charge Minister Dinesh Gundu Rao makes Janatha Darshana.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm