ಬ್ರೇಕಿಂಗ್ ನ್ಯೂಸ್
27-09-23 12:31 pm Mangalore Correspondent ಕರಾವಳಿ
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.




ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Tempo driver commits suicide by jumping to well at Olapete at Thokottu in Mangalore. The Deceased has been identified as Nagesh (62).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm