ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್‌ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್‌ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm