ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm