ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm