ಬ್ರೇಕಿಂಗ್ ನ್ಯೂಸ್
07-10-23 12:09 pm Mangalore Correspondent ಕರಾವಳಿ
ಮಂಗಳೂರು, ಅ.7: ಕೆವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ದಿವಂಗತ ಕುರುಂಜಿ ವೆಂಕಟರಮಣ ಗೌಡರ ಪುತ್ರ ರೇಣುಕಾಪ್ರಸಾದ್ ಅವರನ್ನು ಅನಾರೋಗ್ಯ ನೆಪದಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರೇಣುಕಾಪ್ರಸಾದ್ ಸೇರಿ ಐವರು ಆರೋಪಿಗಳಿಗೆ ಹೈಕೋರ್ಟ್ ಅ.5ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಂಗಳೂರಿನ ಜಿಲ್ಲಾ ಕೋರ್ಟಿನಲ್ಲಿ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇನ್ನೊಬ್ಬ ಆರೋಪಿ ಆಕಾಶಭವನ್ ಶರಣ್ ಅನುಪಸ್ಥಿತಿಯಲ್ಲಿ ರೇಣುಕಾ ಸೇರಿ ಐವರು ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ನಟೋರಿಯಸ್ ರೌಡಿಶೀಟರ್ ಶರಣ್ ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದಾನೆ.
ಹೈಕೋರ್ಟಿನಿಂದ ಅಂದು ರಾತ್ರಿ 9 ಗಂಟೆ ವರೆಗೂ ವಾರಂಟ್ ಆದೇಶ ಬರದೇ ಇದ್ದುದರಿಂದ ಮಂಗಳೂರಿನ ಕೋರ್ಟ್ ಒಳಗಡೆಯೇ ರೇಣುಕಾ ಸೇರಿ ಐವರು ಆರೋಪಿಗಳನ್ನು ಇರಿಸಲಾಗಿತ್ತು. ಆನಂತರ, ರೇಣುಕಾ ಪ್ರಸಾದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆರೋಗ್ಯ ತೊಂದರೆ ಇದೆಯೆಂದು ಹೇಳಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿಯೇ ಇರಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಸಬ್ ಜೈಲಿನಲ್ಲಿ ಹಾಕಲಾಗಿದೆ.
ಕೆವಿಜಿ ಪಾಲಿಟೆಕ್ನಿಕ್ ಆಡಳಿತ ವಶಕ್ಕೆ ಯತ್ನ
ಈ ನಡುವೆ, ಅ.6ರಂದು ರೇಣುಕಾಪ್ರಸಾದ್ ನೋಡಿಕೊಂಡಿದ್ದ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಕೆವಿಜಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆವಿ ಚಿದಾನಂದ ಮತ್ತು ಅವರ ಕುಟುಂಬ ಸದಸ್ಯರು ತೆರಳಿದ್ದು, ಪ್ರಿನ್ಸಿಪಾಲ್ ಮತ್ತು ಇತರ ಸಿಬಂದಿಯ ಮೊಬೈಲ್ ಕೇಳಿ ಶಿಕ್ಷಣ ಸಂಸ್ಥೆಯ ಎಲ್ಲ ದಾಖಲೆ ಪತ್ರಗಳನ್ನು ತಮಗೆ ಒಪ್ಪಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ರೇಣುಕಾಪ್ರಸಾದ್ ಪತ್ನಿ ಡಾ.ಜ್ಯೋತಿ ಅವರು ದೂರು ನೀಡಿದ್ದಾರೆ. ಅಲ್ಲದೆ, ಜ್ಯೋತಿ ಅವರು ಸುದ್ದಿಗೋಷ್ಟಿ ನಡೆಸಿದ್ದು ಈ ಹಿಂದೆಯೂ ನಾವು ಸಂಸ್ಥೆಯನ್ನು ಚೆನ್ನಾಗಿಯೇ ನೋಡಿಕೊಂಡು ಬಂದಿದ್ದೇವೆ. ಮುಂದೆಯೂ ಕಾಲೇಜು ಆಡಳಿತವನ್ನು ನೋಡಿಕೊಳ್ಳುತ್ತೇವೆ. ರೇಣುಕಾ ಅವರಿಗೆ ಶಿಕ್ಷೆ ಆಗಿರುವ ಬಗ್ಗೆ ನೋವಿದೆ. ನಾವದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದಿದ್ದಾರೆ.
Sullia Kvg college Murder case, Dr Renuka Prasad admitted to Hospital after life imprisonment order. The High Court of Karnataka has convicted Renuka Prasad, son of Sullia-based KVG group of educational institutions’ founder, the late Kurunji Venkataramala Gowda, and five others in the 2011 case of murder of A.S. Ramakrishna, who was the administrator of KVG Medical College, Sullia in Dakshnia Kannada district, and sentenced four of them to life imprisonment.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm