Shivamogga eid, Puttur Arun Puthila: ಶಿವಮೊಗ್ಗದಲ್ಲಿ ಪ್ರಚೋದನಕಾರಿ ಹೇಳಿಕೆ ; ಅರುಣ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು

07-10-23 01:01 pm       Mangalore Correspondent   ಕರಾವಳಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು, ಅ.7: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಅ.6ರಂದು ಭೇಟಿ ನೀಡಿದ್ದ ಅರುಣ್ ಪುತ್ತಿಲ, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಗಿಗುಡ್ಡದ ಘಟನೆಗೆ ಮತಾಂಧ ಮುಸ್ಲಿಂ ಸಮುದಾಯ ಕಾರಣ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಹಿಂದು ಸಮಾಜ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ. ನಮ್ಮಲ್ಲಿಯೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.‌

ನವರಾತ್ರಿ ದಿನ ನಾವು ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಈ ಬಾರಿ ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂ ಡ್ರೈವರ್, ಸ್ಪಾನರ್ ಕೈ ಬಿಟ್ಟು ತಲ್ವಾರ್ ಗಳನ್ನು ಮುಂದಿಟ್ಟು ಪೂಜೆ ಸಲ್ಲಿಸಬೇಕು ಎಂದು ಪ್ರಚೋದನಕಾರಿ‌ ಹೇಳಿಕೆ ನೀಡಿದ್ದರು. ಸಾಕಷ್ಟು ಸಾರ್ವಜನಿಕರು ಸೇರಿರುವಾಗಲೇ ಈ ರೀತಿ ಹೇಳಿಕೆ ನೀಡಿದ ಬಗ್ಗೆ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

Shivamogga eid, Sumoto case filed against Puttur Arun Puthila for controversial remarks.