ಬ್ರೇಕಿಂಗ್ ನ್ಯೂಸ್
10-10-23 05:11 pm Udupi Correspondent ಕರಾವಳಿ
ಉಡುಪಿ, ಅ.10: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯದ ಮೂಲಕ ಜಾಮೀನು ಪಡೆದುಕೊಂಡಿರುವ ಶರಣ್ ಪಂಪ್‌ವೆಲ್ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು, ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ.
ಉಡುಪಿಯ ಸಮಾಜೋತ್ಸವದಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು ಉಡುಪಿ ಪೊಲೀಸರ ಆದೇಶದ ಬಗ್ಗೆ ತಿಳಿದು ಹೆಜಮಾಡಿಯಿಂದ ವಾಪಸ್ಸಾಗಿರುವ ಮಾಹಿತಿ ಲಭಿಸಿದೆ.
ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ನ್ಯಾಯಾಲಯ ನೀಡಿರುವ ಜಾಮೀನಿನಲ್ಲಿನ ಷರತ್ತಿನ ಅನ್ವಯ ಶರಣ್ ಪಂಪ್‌ವೆಲ್ ಅನುಮತಿ ಇಲ್ಲಿದೆ ದ.ಕ. ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಒಂದು ವೇಳೆ ಅದನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಗೆ ಆಗಮಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Bajrang Dal Shaurya Yatre in Udupi, Sharan Pumpwell stopped by Police over court order. Udupi police did not allow him to take part in the event.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm