Mangalore Asif Apathbhandava arrested: ವೆನ್ಲಾಕ್ ಮಹಿಳಾ ಸೆಕ್ಯುರಿಟಿಗೆ ಕೈಮಾಡಿದ ಆರೋಪ ; ಆಸಿಫ್ ಆಪತ್ಬಾಂಧವ ಬಂಧನ

11-10-23 10:25 pm       Mangalore Correspondent   ಕರಾವಳಿ

ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.

ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangalore social activist Asif Apathbhandava arrested for misbehaving with lady staff at hospital.