ಬ್ರೇಕಿಂಗ್ ನ್ಯೂಸ್
14-10-23 12:39 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಪ್ರಾರ್ಥನೆ ನಡೆಸುವಂತೆ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನಗರದ ಬಂದರು ಬಳಿಯ ಕಂದುಕ ಪ್ರದೇಶದ ನಿವಾಸಿಯಾಗಿರುವ ಜಾಕಿರ್ ಎಂಬಾತ ಈ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿರುವ ಈತ, ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಹೇಳಿದ್ದಾನೆ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿದ್ದ.
ನಿನ್ನೆ ಶುಕ್ರವಾರ ಹೆಚ್ಚಿನ ಮಸೀದಿಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರಾರ್ಥನೆ ನಡೆಸಲಾಗಿದೆ. ಇದೇ ವಿಚಾರದಲ್ಲಿ ಮಂಗಳೂರಿನ ರಾವ್ ಅಂಡ್ ರಾವ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಂಘಟನೆಯೊಂದು ಮೌನ ಪ್ರತಿಭಟನೆಗೆ ಸಜ್ಜಾಗಿತ್ತು. ಆದರೆನ ಕೊನೆ ಕ್ಷಣದಲ್ಲಿ ಧಾರ್ಮಿಕ ಮುಖಂಡರ ಸೂಚನೆಯಂತೆ ಪ್ರತಿಭಟನೆ ಕೈಬಿಡಲಾಗಿತ್ತು.
ಝಾಕಿರ್ ವಿಡಿಯೋ ಬಗ್ಗೆ ಹಿಂದು ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು ಉಗ್ರರನ್ನು ಬೆಂಬಲಿಸಿದ ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಈ ಬಗ್ಗೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿವೆ.
#Mangalore #Muslim man video dressed up like #ISIS requesting to supoort #Hamas goes viral. In the video he is seen requesting poeople to join hands with Hamas #israel #breakingnews pic.twitter.com/LA9Wad5BVJ
— Headline Karnataka (@hknewsonline) October 14, 2023
Mangalore Muslim man video dressed up like ISIS requesting to supoort Hamas goes viral. It is said that he is a resident of Bunder in Mangalore.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm