ಬ್ರೇಕಿಂಗ್ ನ್ಯೂಸ್
18-10-23 07:58 pm Mangalore Correspondent ಕರಾವಳಿ
ಮಂಗಳೂರು, ಅ.18: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ.
ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಇವರು ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ನುಗ್ಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ನೇರವಾಗಿ ರಸ್ತೆಯಿಂದ ಹೊರಗೆ ಬಂದಿದ್ದು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ಯುವತಿಯರ ಮೇಲೆರಗಿದೆ. ಒಬ್ಬಳು ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರೆ, ಇತರ ನಾಲ್ಕು ಮಂದಿಯೂ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.



ಕಾರು ಸಂಪೂರ್ಣ ಚಾಲಕನ ನಿಯಂತ್ರಣ ಇಲ್ಲದ ರೀತಿ ಹುಡುಗಿಯರ ಮೇಲೆ ಹರಿದಿದ್ದು ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ನಾಲ್ಕು ಹುಡುಗಿಯರಿಗೆ ಡಿಕ್ಕಿಯಾದ ಬಳಿಕ ರಸ್ತೆ ದಾಟುತ್ತಿದ್ದ ಇನ್ನೊಬ್ಬ ಮಹಿಳೆಗೂ ಡಿಕ್ಕಿಯಾಗಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಅಪಘಾತದ ಬಳಿಕ ಕಾರನ್ನು ನಿಲ್ಲಿಸದೆ, ಮಣ್ಣಗುಡ್ಡದ ಮನೆಗೆ ತೆರಳಿದ್ದ. ಮನೆಗೆ ಹೋಗಿ ತಂದೆಯ ಜೊತೆಗೆ ಪಾಂಡೇಶ್ವರ ಠಾಣೆಗೆ ಆಗಮಿಸಿದ್ದ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Mangalore Mannagudda accident, girls dies on spot after car rams her on the divider. The video of this has gone viral social media. The girls were on their way to the bus stand after visiting the kudroli temple for dasara.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm