VHP Sharan Pumpwell; ಸಂತೆ ವ್ಯಾಪಾರ ನೆಪದಲ್ಲಿ ಕೋಮು ದ್ವೇಷಕ್ಕೆ ಯತ್ನ ; ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸುಮೊಟೋ ಕೇಸು 

18-10-23 10:42 pm       Mangalore Correspondent   ಕರಾವಳಿ

ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ನೆಪದಲ್ಲಿ ಸಂತೆ ವ್ಯಾಪಾರಸ್ಥರನ್ನು ವಿಭಜಿಸಿ ಹಿಂದುಗಳ ಅಂಗಡಿಗಳಿಗೆ ಭಗವಾಧ್ವಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ನೀಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ದ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಂಗಳೂರು, ಅ.18: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ನೆಪದಲ್ಲಿ ಸಂತೆ ವ್ಯಾಪಾರಸ್ಥರನ್ನು ವಿಭಜಿಸಿ ಹಿಂದುಗಳ ಅಂಗಡಿಗಳಿಗೆ ಭಗವಾಧ್ವಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ನೀಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ದ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದರು. ಅಲ್ಲದೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಹಿಂದೂಗಳು ಹಿಂದೂ ವ್ಯಾಪಾರಿಗಳಿಂದಲೇ ವ್ಯಾಪಾರ ಮಾಡುವಂತೆ ಹೇಳಿಕೆ ನೀಡಿದ್ದರು. ಈ ರೀತಿಯ ನಡೆಯನ್ನು ಜಾತ್ಯತೀತ ಪಕ್ಷಗಳ ನಾಯಕರು ಖಂಡಿಸಿ, ಇದರಿಂದ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆಯೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರು ಕೊಟ್ಟು ಕ್ರಮಕ್ಕೆ ಆಗ್ರಹಿಸಿದ್ದರು. 

ಇದರಂತೆ, ಪಾಂಡೇಶ್ವರ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಐ ಮನೋಹರ್ ಪ್ರಸಾದ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಐಪಿಸಿ 153 ಎ ಅಡಿಯಲ್ಲಿ ಪ್ರಚೋದನೆಗೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬುಧವಾರ ಬೆಳಗ್ಗೆ ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ ಸಂಘಟನೆಗಳ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಅಲ್ಲದೆ, ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.

Mangalore Sumoto case registered against VHP Sharan Pumpwell over Mangaladevi temple saffron row.