ಬ್ರೇಕಿಂಗ್ ನ್ಯೂಸ್
20-10-23 07:45 pm Udupi Correspondent ಕರಾವಳಿ
ಉಡುಪಿ, ಅ.20: ಅವರಿಬ್ಬರು ಸೋದರರು ದೇಶದ ಅಗ್ರಗಣ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಉಡುಪಿ ಮೂಲದ ಇಬ್ಬರು ಸೋದರರೂ ಈಗ ಕೇವಲ ಏಳು ಗಂಟೆಗಳ ಅಂತರದಲ್ಲಿ ಜೊತೆಯಾಗಿಯೇ ಇಹಲೋಕ ತ್ಯಜಿಸಿ ಸುದ್ದಿಯಾಗಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಐಡಿಬಿಐ ಬ್ಯಾಂಕ್ ನಲ್ಲಿ ಜನರಲ್ ಮೆನೇಜರ್ ಆಗಿ ನಿವೃತ್ತರಾಗಿದ್ದ ಉಡುಪಿ ಅನಂತಪದ್ಮನಾಭ ಆಚಾರ್ಯ (90) ಮತ್ತು ಮಹಾರಾಷ್ಟ್ರ ರಾಜ್ಯದ ನಿವೃತ್ತ ಪ್ರಧಾನ ಅಕೌಂಟೆಂಟ್ ಜನರಲ್ ಉಡುಪಿ ಶ್ರೀನಿವಾಸ ಆಚಾರ್ಯ (88) ಅ.18 ಮತ್ತು ಅ.19ರಂದು ನಿಧನರಾಗಿದ್ದಾರೆ.
ಅನಂತ ಆಚಾರ್ಯ ರಾಣೆಬೆನ್ನೂರಿನಲ್ಲಿ ಕಾರ್ಪೊರೇಶನ್ ಬ್ಯಾಂಕ್ ಉದ್ಯೋಗಿಯಾಗಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸೇರಿದ್ದು ಆನಂತರ ಆರ್‌ಬಿಐನಲ್ಲಿಯೂ ಸೇವೆ ಸಲ್ಲಿಸಿದ್ದರು. ಮುಂಬಯಿ, ದಿಲ್ಲಿ, ಜೈಪುರ, ಲಕ್ನೋದಲ್ಲಿ ಸೇವೆಯಲ್ಲಿದ್ದ ಆಚಾರ್ಯರು ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಮತ್ತು ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಐಡಿಬಿಐ)ದಲ್ಲಿ ಜನರಲ್ ಮೆನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಮಣಿಪಾಲದ ರಾಹುಲ್ ನಗರದಲ್ಲಿ ನೆಲೆಸಿದ್ದರು. ಕೃಷಿ, ಕರ್ನಾಟಕ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಶ್ರೀನಿವಾಸ ಆಚಾರ್ಯರು ಸೆಂಟ್ರಲ್ ರೈಲ್ವೇ ಇಲಾಖೆಗೆ ಉದ್ಯೋಗಿಯಾಗಿ ಸೇರಿದ್ದು ಬಳಿಕ ನಾಗರಿಕ ಸೇವೆಗೆ ಸೇರಿದ್ದರು. ಮುಂಬೈಯಲ್ಲಿ ಸಹಾಯಕ ಅಕೌಂಟೆಂಟ್ ಜನರಲ್, ಮಣಿಪುರ ರಾಜ್ಯದ ಮೊದಲ ಉಪ ಅಕೌಂಟೆಂಟ್ ಜನರಲ್ ಆಗಿದ್ದರು. ಮಣಿಪುರ, ಕೇರಳ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ದಿಲ್ಲಿಯ ಕೈಗಾರಿಕ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದರು. ಸ್ಟೇಟ್ ಟ್ರೇಡಿಂಗ್ ಕಾರ್ಪೊರೇಶನ್, ಕರ್ನಾಟಕ ಪವರ್ ಕಾರ್ಪೊರೇಶನ್ ಹಣಕಾಸು ನಿರ್ದೇಶಕ, ಬನಾರಸ್ ಹಿಂದು ವಿ.ವಿ. ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮಹಾರಾಷ್ಟ್ರ ರಾಜ್ಯದ ಪ್ರಧಾನ ಅಕೌಂಟೆಂಟ್ ಜನರಲ್ ಆಗಿ ನಿವೃತ್ತರಾಗಿದ್ದರು.
ಉಡುಪಿ ಕುಂಜಿಬೆಟ್ಟಿನಲ್ಲಿ ನೆಲೆಸಿದ್ದ ಆಚಾರ್ಯರು ದತ್ತಿ ಸಂಸ್ಥೆಗಳಿಗೆ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಪರಿಸರ- ಪ್ರಾಣಿದಯಾ ಸಂಸ್ಥೆಗಳಿಗೆ ನೆರವು ನೀಡುತ್ತಿದ್ದರು. ಮೃತರು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
In a shocking incident, two brothers died within a span of a day in Udupi. Udupi Ananthapadmanabha Acharya (90), retired General Manager of Reserve Bank of India (RBI), IDBI Bank and Udupi Srinivas Acharya (88), retired Chief Accountant General of Maharashtra State, are the brothers who passed away on October 19 and October 18 respectively.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm