ಬ್ರೇಕಿಂಗ್ ನ್ಯೂಸ್
21-10-23 10:35 pm Mangalore Correspondent ಕರಾವಳಿ
ಮಂಗಳೂರು, ಅ.21: ಫೈನಾನ್ಸ್ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಸಸಿಹಿತ್ಲು ಭಗವತಿ ದೇವಸ್ಥಾನದ ಬಳಿ ಸಂಶಯಾಸ್ಪದ ರೀತಿಯಲ್ಲಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೈನಾನ್ಸ್, ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಉದ್ಯಮ ಮಾಡಿಕೊಂಡಿದ್ದ ಸಸಿಹಿತ್ಲು ನಿವಾಸಿ ಸಚಿನ್ ಕುಕ್ಯಾನ್ (40) ಮೃತ ವ್ಯಕ್ತಿ. ಅ.19ರಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಂದು ಮಧ್ಯಾಹ್ನ ಸಚಿನ್ ಕುಟುಂಬದ ಹೆಸರಲ್ಲಿ ಸಸಿಹಿತ್ಲು ಭಗವತಿ ದೇವಸ್ಥಾನದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಊಟದ ಬಳಿಕ ಸಚಿನ್ ಅವರು ತನ್ನ ಪತ್ನಿಯನ್ನು ಮನೆಗೆ ಕರೆದೊಯ್ದು ಬಿಟ್ಟು ಬಂದಿದ್ದರು. ಬಳಿಕ ಕುದ್ರೋಳಿ ದೇವಸ್ಥಾನಕ್ಕೆಂದು ಹೊರಡಲು ತಯಾರಿ ನಡೆಸುತ್ತಿದ್ದರು.
ಎರಡು ಗಂಟೆ ವೇಳೆಗೆ ಮನೆಯಿಂದ ಸ್ವಲ್ಪ ದೂರದಲ್ಲಿ ನಿಲ್ಲಿಸಿದ್ದ ಕಾರಿನತ್ತ ಬಂದಿದ್ದು ಅಲ್ಲಿ ಫೋನಲ್ಲಿ ಮಾತನಾಡುತ್ತಿದ್ದಾಗಲೇ ದಿಢೀರ್ ಆಗಿ ಕುಸಿದು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಣೆಗೆ ಗಾಯಗೊಂಡಿದ್ದ ರೀತಿಯಲ್ಲಿ ಸಚಿನ್ ಪತ್ತೆಯಾಗಿದ್ದರು. ಕೂಡಲೇ ಸ್ಥಳೀಯರು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಸಾವು ಕಂಡಿದ್ದರು. ಹಣೆಗೆ ಗಾಯಗೊಂಡ ರೀತಿ ಕಂಡುಬಂದಿದ್ದರಿಂದ ಯಾರೋ ಹೊಡೆದು ಹೋಗಿರಬೇಕೆಂದು ಶಂಕೆ ವ್ಯಕ್ತವಾಗಿದ್ದು ಸಾವಿನ ಬಗ್ಗೆ ಸಂಶಯಿಸಿ ಮನೆಯವರು ಪೊಲೀಸ್ ದೂರು ನೀಡಿದ್ದಾರೆ.
ಪೊಲೀಸರು ಸ್ಥಳದಲ್ಲಿ ಆಸುಪಾಸಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಅಂತಹ ಕೃತ್ಯದ ಸುಳಿವು ಸಿಕ್ಕಿಲ್ಲ ಎನ್ನುತ್ತಿದ್ದಾರೆ. ಹಣೆಗೆ ಗಾಯವಾಗಿದ್ದು ಹೌದು. ಹೃದಯಾಘಾತದಿಂದ ಕುಸಿದು ಬಿದ್ದು ರಸ್ತೆಯ ಕಾಂಕ್ರೀಟ್ ತಾಗಿ ಗಾಯವಾಗಿರುವ ಸಾಧ್ಯತೆಯಿದೆ. ಪೋಸ್ಟ್ ಮಾರ್ಟಂ ವರದಿಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರು ಸಾವಿನ ಬಗ್ಗೆ ಸಂಶಯಿಸಿದ್ದು ಅದೇ ವೇಳೆಗೆ ಯಾವುದೋ ಸ್ವಿಫ್ಟ್ ಕಾರು ಬಂದಿತ್ತು. ನಾಲ್ಕು ನಿಮಿಷದಲ್ಲಿ ಘಟನೆ ನಡೆದು ಹೋಗಿತ್ತು. ಅದರ ಬೆನ್ನಲ್ಲೇ ಬಸ್ ಬಂದಿದ್ದು ಬಸ್ ಸಿಬಂದಿಯೇ ಸಚಿನ್ ಕುಸಿದು ಬಿದ್ದಿರುವುದನ್ನು ತಿಳಿಸಿದ್ದರು ಎನ್ನುತ್ತಾರೆ, ಸ್ಥಳೀಯರು. ಸಚಿನ್ ಹಿಂದು ಸಂಘಟನೆಯಲ್ಲಿ ಗುರುತಿಸಿದ್ದು ಅಂತ್ಯಕ್ರಿಯೆ ಸಂದರ್ಭದಲ್ಲಿ ಸಾಕಷ್ಟು ಜನ ಸೇರಿದ್ದರು. ಸ್ಥಳೀಯವಾಗಿ ಎಲ್ಲರಿಗೂ ಬೇಕಾದ ವ್ಯಕ್ತಿಯಾಗಿದ್ದರು.
Mangalore Real estate dealer Sachin Body found near temple in suspicious way at Sasihithlu in Surathkal. The deceased has been identified as Sachin. He was also a financier and popular man locally.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm