ಬ್ರೇಕಿಂಗ್ ನ್ಯೂಸ್
23-10-23 03:03 pm Udupi Correspondent ಕರಾವಳಿ
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karkala Missing police head constable Shrutin Shetty dead body found inside the well. Karkala Police are now investigating the angel of death. Shetty was found missing as he left the police station. Wife has filed a missing complaint.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm